ಸ್ವಾಗತ ನಿಮ್ಮ ಬುಟ್ಟಿ (0) | ಒಳಗೆ | ನೋಂದಾಯಿಸು
ಸುದ್ದಿ ಸಮಾಚಾರ:
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ಸಿ.ಟಿ. ರವಿ ಅವರು ಇಂದು ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಗತಿ ಪರಿಶೀಲನೆ ನಡೆಸಿದರು - ಹೆಚ್ಚಿನ ಮಾಹಿತಿಗೆ | ಪುಸ್ತಕ ಕೊಳ್ಳುವ ಬಗೆ... - ಹೆಚ್ಚಿನ ಮಾಹಿತಿಗೆ |

ಸುದ್ದಿ ಸಮಾಚಾರ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ಸಿ.ಟಿ. ರವಿ ಅವರು ಇಂದು ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಗತಿ ಪರಿಶೀಲನೆ ನಡೆಸಿದರು

09 Sep 2020 01:34 pm

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ಸಿ.ಟಿ. ರವಿ ಅವರು ಇಂದು ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಗತಿ ಪರಿಶೀಲನೆ ನಡೆಸಿದರು. ಇಲಾಖೆಯ ಕಾರ್ಯದರ್ಶಿ ರಶ್ಮಿ ಮಹೇಶ್, ನಿರ್ದೇಶಕರಾದ  ರಂಗಪ್ಪ ಹಾ ಜರಿದ್ದರು. 

...


ಕನ್ನಡ ಪುಸ್ತಕ ಪ್ರಾಧಿಕಾರದ ಸ್ಥಾಯಿಸಮಿತಿ ಸಭೆ ಇಂದು ಆಯೋಜನೆಗೊಂಡಿತು

26 Aug 2020 07:33 pm

ಕನ್ನಡ ಪುಸ್ತಕ ಪ್ರಾಧಿಕಾರದ ಸ್ಥಾಯಿಸಮಿತಿ ಸಭೆ ಇಂದು ಆಯೋಜನೆಗೊಂಡಿತು. Zoom app ಮುಲಕ ಈ ಸಭೆ ನಡೆಸಲಾಯಿತು. 2020-21 ನೆ ಸಾಲಿನ ಕ್ರಿಯಾ ಯೋಜನೆ ಹಾಗೂ ಇತರ ಸಂಗತಿಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು . ಕನ್ನಡ ಪುಸ್ತಕ ಪ್ರಾಧಿಕಾರದ ಮಾನ್ಯ ಅಧ್ಯಕ್ಷರಾದ ಡಾ. ಎಂ ಎನ್. ನಂದೀಶ್ ಹಂಚೆ ಈ ಸಭೆಯ ಅಧ್ಯಕ್ಷತೆ ವಹಿಸಿದ್ದರು.

...


ಗೀತಾ ನಾಗಭೂಷಣ ಅವರ ನಿಧನಕ್ಕೆ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರ ಸಂತಾಪ

29 Jun 2020 12:59 pm

ಕನ್ನಡದ ಹಿರಿಯ ಸಾಹಿತಿ ಶ್ರೀಮತಿ ಗೀತಾ ನಾಗಭೂಷಣ ಅವರ ನಿಧನಕ್ಕೆ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಎಂ. ಎನ್. ನಂದೀಶ್ ಹಂಚೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಗೀತಾ ನಾಗಭೂಷಣ ಅವರು ಕನ್ನಡ ಸಾಹಿತ್ಯಲೋಕ ಕಂಡ ಪ್ರಗತಿಪರ ಚಿಂತನೆಯ ಲೇಖಕರಲ್ಲಿ ಒಬ್ಬರಾಗಿದ್ದರು. ಮಹಿಳಾ ಸಂವೇದನೆಯನ್ನು ಅವರಷ್ಟು ಶಕ್ತಿಯುತವಾಗಿ ಪ್ರತಿಪಾದಿಸಿದವರು ವಿರಳ. ಹಿಂದುಳಿದ ವರ್ಗಗಳ ಬಡಜನರ ತಲ್ಲಣಗಳನ್ನು, ವಿಶೇಷವಾಗಿ ಮಹಿಳೆಯರ ಮೇಲಿನ ದಬ್ಬಾಳಿಕೆಯನ್ನು ಅವರು ತಮ್ಮ ಕಾದಂಬರಿಗಳಲ್ಲಿ ಪರಿಣಾಮಕಾರಿಯಾಗಿ ಚಿತ್ರಿಸಿದ್ದರು. ಅವರ 'ಬದುಕು' ಹಾಗೂ 'ಹಸಿಮಾಂಸ...


ಇ-ಟೆಂಡರ್ ಪ್ರಕಟಣೆ (ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ ಮುಖಾಂತರ ಮಾತ್ರ) ಬಗ್ಗೆ.

21 May 2020 07:45 pm

ಇ-ಟೆಂಡರ್ ಪ್ರಕಟಣೆ (ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ ಮುಖಾಂತರ ಮಾತ್ರ) ಬಗ್ಗೆ.
 
:: ಅಲ್ಪಾವಧಿ ಇ-ಟೆಂಡರ್ ಪ್ರಕಟಣೆ ::
 

 ‘ಕನ್ನಡ ಪುಸ್ತಕ ಸೊಗಸು-2019’ ಬಹುಮಾನಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಿಸುವ ಬಗ್ಗೆ

08 May 2020 07:43 pm

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ, ಜನವರಿ 2019 ರಿಂದ ಡಿಸೆಂಬರ್ 2019 ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಬಹುಮಾನಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಕೋವಿಡ್-19ರ ಪರಿಸ್ಥಿ ಹಿನ್ನೆಲೆಯಲ್ಲಿ ಪುಸ್ತಕ ಕಳಿಸುವ ಕೊನೆ ದಿನಾಂಕವನ್ನು 30 ಮೇ 2020ರ ವರೆಗೆ ವಿಸ್ತರಿಸಲಾಗಿದೆ 

ಆಸಕ್ತ ಪ್ರಕಾಶಕರು /ಮುದ್ರಕರು/ ಕಲಾವಿದರು / ಲೇಖಕರುಗಳು...


2019ನೇ ಸಾಲಿಗೆ ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಿಸುವ ಬಗ್ಗೆ.

08 May 2020 07:34 pm

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2019ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಕೋವಿಡ್-19ರ ಪರಿಸ್ಥಿ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು 30 ಮೇ 2020ರ ವರೆಗೆ ವಿಸ್ತರಿಸಲಾಗಿದೆ. 

ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ...


ನಿಸಾರ್ ಅಹಮದ್ ನಿಧನಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರ ಸಂತಾಪ

03 May 2020 05:47 pm

 

ಕನ್ನಡದ ಪ್ರಖ್ಯಾತ ಕವಿ ನಿಸಾರ್ ಅಹಮದ್ ಅವರ ನಿಧನಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಎಂ ಎನ್ ನಂದೀಶ್ ಹಂಚೆ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಕೊನೆಯಾಯಿತು ಕನ್ನಡದ ಕಾವ್ಯ ಉತ್ಸವ ಎಂದು ಅವರ ಅಗಲಿಕೆಯ ನೋವನ್ನು ತೋಡಿಕೊಂಡಿರುವ ನಂದೀಶ್ ಹಂಚೆ ಅವರು, ನಿಸಾರ್ ಅಹಮದ್ ಅವರು ಈ ಶತಮಾನ ಕಂಡ ಶ್ರೇಷ್ಠ ಕವಿ ಎಂದು ಬಣ್ಣಿಸಿದ್ದಾರೆ.

ಪದ್ಮಶ್ರೀ, ನಾಡೋಜ, ಪಂಪ ಪ್ರಶಸ್ತಿ, ಅನ ಕೃಷ್ಣರಾಯ ಪ್ರಶಸ್ತಿ,...


ಪಾಟೀಲ ಪುಟ್ಟಪ್ಪ ನಿಧನಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರ ಸಂತಾಪ

17 Mar 2020 02:57 pm

ಕನ್ನಡದ ಖ್ಯಾತ ಪತ್ರಕರ್ತ, ಕನ್ನಡಪರ ಹೋರಾಟಗಾರ, ಲೇಖಕ ಪಾಟೀಲ ಪುಟ್ಟಪ್ಪ ಅವರ ನಿಧನಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್‌ ಹಂಚೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಪಾಟಿಲ ಪುಟ್ಟಪ್ಪ ಅವರಂತಹ ಧೀಮಂತ ವ್ಯಕ್ತಿಯ ನಿಧನದಿಂದ ಕನ್ನಡ ನಾಡು ತನ್ನ ದಿಟ್ಟ ದನಿಯನ್ನ ಕಳೆದುಕೊಂಡಂತಾಗಿದೆ  ಎಂದು ಅವರು ಹೇಳಿದ್ದಾರೆ. 

ಕನ್ನಡ ಭಾಷೆ ಮತ್ತು ಸಂಸ್ಕೃತಿ, ಕನ್ನಡ ನಾಡು ನುಡಿಯ ವಿಚಾರಗಳಲ್ಲಿ ಯಾವುದೇ ಒಡಕು ಕಂಡುಬಂದಲ್ಲಿ...


ಅರ್ಜಿಸಲ್ಲಿಸುವ ಲೇಖಕರ ವಯೋಮಿತಿಯನ್ನು 18 ರಿಂದ 40 ವರ್ಷಕ್ಕೆ ಹೆಚ್ಚಿಸಲಾಗಿದೆ.

16 Mar 2020 02:34 pm

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2019ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಸಲ್ಲಿಸುವ ಲೇಖಕರ ವಯೋಮಿತಿಯನ್ನು 18 ರಿಂದ 40 ವರ್ಷಕ್ಕೆ ಹೆಚ್ಚಿಸಲಾಗಿದೆ.      

ಅರ್ಜಿಗಳನ್ನು ದಿನಾಂಕ:15.04.2020ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560 002 – ಅವರಿಗೆ ಕಳುಹಿಸಿಕೊಡಲು ಕೋರಿದೆ. 

ಹೆಚ್ಚಿನ ಮಾಹಿತಿಗಾಗಿ :
ಆಡಳಿತಾಧಿಕಾರಿಗಳು,...


2019ನೇ ಸಾಲಿಗೆ ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

10 Mar 2020 06:00 pm

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2019ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.

ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು...


ಕನ್ನಡ ಪುಸ್ತಕ ಸೊಗಸು-2019 ಅರ್ಜಿ ಆಹ್ವಾನ

10 Mar 2020 05:55 pm

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ, ಜನವರಿ 2019 ರಿಂದ ಡಿಸೆಂಬರ್ 2019ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಬಹುಮಾನಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಕೃತಿಗಳ ಪ್ರಕಾಶಕರು / ಮುದ್ರಕರು / ಕಲಾವಿದರಿಗೆ ‘ಕನ್ನಡ ಪುಸ್ತಕ ಸೊಗಸು-2019’  ಬಹುಮಾನವನ್ನು ನೀಡಲಾಗುವುದು.

ಆಸಕ್ತ ಪ್ರಕಾಶಕರು /ಮುದ್ರಕರು/ ಕಲಾವಿದರು / ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ, ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ...


ಪುಸ್ತಕ ಸೊಗಸು ಮುಖಪುಟ ಚಿತ್ರವಿನ್ಯಾಸ ಬಹುಮಾನ ಪ್ರದಾನ

10 Mar 2020 05:46 pm

ಕನ್ನಡ ಪುಸ್ತಕ ಪ್ರಾಧಿಕಾರದ 2018ನೇ ಸಾಲಿನ ಕನ್ನಡ ಪುಸ್ತಕ ಸೊಗಸು ಮುಖಪುಟ ಚಿತ್ರವಿನ್ಯಾಸ ಬಹುಮಾನವನ್ನು ಖ್ಯಾತ ಚಿತ್ರಕಲಾವಿದ ಶ್ರೀ ಕೆ. ಚಂದ್ರನಾಥ ಆಚಾರ್ಯ ಅವರಿಗೆ ಇಂದು ಪ್ರಾಧಿಕಾರದ ಕಚೇರಿಯಲ್ಲಿ ಪ್ರದಾನ ಮಾಡಲಾಯಿತು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್‌ ಹಂಚೆ ಸ್ಮರಣಿಕೆ ಹಾಗೂ ರೂ.10,000-00ಗಳ ನಗದು ಬಹುಮಾನವನ್ನು ವಿತರಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳಾದ ಕೆ.ಬಿ....


ಅಲ್ಪಾವಧಿ ಇ-ಟೆಂಡರ್ ಪ್ರಕಟಣೆ (ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ ಮುಖಾಂತರ ಮಾತ್ರ) ಬಗ್ಗೆ.

10 Mar 2020 01:02 pm

ಕನ್ನಡ ಪುಸ್ತಕ ಪ್ರಾಧಿಕಾರದಿಂದ 2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ಮಂಗಳೂರು, ಕಲಬುರ್ಗಿ, ಬೆಳಗಾವಿಯಲ್ಲಿ ‘ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳ’ನ್ನು ನಡೆಸಲು ತಾತ್ಕಾಲಿಕ ಮಳಿಗೆ ನಿರ್ಮಿಸುವ ಬಗ್ಗೆ. ಸೂಕ್ತ ನೋಂದಾಯಿತ ಸಂಸ್ಥೆ / ವ್ಯಕ್ತಿಗಳಿಂದ  ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ ಮೂಲಕ ಅಲ್ಪಾವಧಿ ಇ-ಟೆಂಡರ್ ಕರೆಯಲಾಗಿದ್ದು, ಅಂದಾಜು ಮೊತ್ತ ರೂ.40,00,000-00ಗಳು, ಅಲ್ಪಾವಧಿ ಇ-ಟೆಂಡರ್ ದಾಸ್ತಾವೇಜು ಹಾಗೂ ಇತರೆ ಮಾಹಿತಿಗೆ  https://eproc.karnataka.gov.in ನಲ್ಲಿ ಪಡೆಯ ಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ...


ತಿಂಗಳ ಬೆಳಕು - ವಿಚಾರ ಸಂಕಿರಣ

24 Feb 2020 04:02 pm

 

...


೨೦೧೮ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿ ಹಾಗೂ ಬಹುಮಾನ ಪ್ರದಾನ ಸಮಾರಂಭ

01 Feb 2020 06:58 pm

...


ತಿಂಗಳ ಬೆಳಕು

22 Jan 2020 02:19 pm

...


ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

03 Jan 2020 08:13 pm

ಗಣರಾಜ್ಯೋತ್ಸವದ ಅಂಗವಾಗಿ 2020ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ  ಮಾರಾಟ ಮಾಡಲಾಗುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ...


ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಸಾಹಿತಿಗಳಿಗೆ ಚೊಚ್ಚಲ ಕೃತಿ ಪ್ರಕಟಣೆಗಾಗಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

01 Jan 2020 12:55 pm

ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವಬರಹಗಾರರ ಕನ್ನಡದ ಚೊಚ್ಚಲ ಕೃತಿ ಪ್ರಕಟಣೆಗೆ ರೂ.25,000-00 ಗಳ ಪ್ರೋತ್ಸಾಹಧನ ನೀಡುವ ಯೋಜನೆ ರೂಪಿಸಿದೆ. ಅದಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್‍.ಡಿ. ನಂಬರ್ಇರುವ ಜಾತಿ ಪ್ರಮಾಣ ಪತ್ರ, ಆದಾರ್ಕಾರ್ಡ್ಜೆರಾಕ್ಸ್ಪ್ರತಿ, ರೇಷನ್ಕಾರ್ಡ್ ಹಾಗೂ ಪಾನ್ಕಾರ್ಡ್‌‌ ಝೆರಾಕ್ಸ್ಪ್ರತಿ, ವಯಸ್ಸಿನ ದೃಢೀಕರಣಕ್ಕಾಗಿ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ...


ಹೊಸವರ್ಷದ ಹಾರ್ದಿಕ ಶುಭಾಶಯಗಳು. ಹೊಸವರ್ಷ ತರಲಿ ಬಾಳಿಗೆ ಹರ್ಷ.

01 Jan 2020 12:23 pm

ಹೊಸವರ್ಷದ ಹಾರ್ದಿಕ ಶುಭಾಶಯಗಳು.  ಹೊಸವರ್ಷ ತರಲಿ ಬಾಳಿಗೆ ಹರ್ಷ.
-ಡಾ. ಎಂ.ಎನ್. ನಂದೀಶ್ ಹಂಚೆ
ಅಧ್ಯಕ್ಷರು, ಕನ್ನಡ ಪುಸ್ತಕ ಪ್ರಾಧಿಕಾರ

...


ಎಲ್ಲ ಪ್ರಾಧಿಕಾರಗಳ ಹಾಗೂ ಅಕಾಡೆಮಿಗಳ ಅಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಕಾರ್ಯಾಗಾರ

28 Dec 2019 12:53 pm

ಬೆಂಗಳೂರಿನಲ್ಲಿ ದಿನಾಂಕ 28-12-2019 ರಂದು ಎಲ್ಲ ಪ್ರಾಧಿಕಾರಗಳ ಹಾಗೂ ಅಕಾಡೆಮಿಗಳ ಅಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಇಲಾಖೆಯು ಏರ್ಪಡಿಸಿದ ಕಾರ್ಯಾಗಾರದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪುಸ್ತಕ ಪ್ರದರ್ಶನ. ಪ್ರಾಧಿಕಾರದ ಸಿಬ್ಬಂದಿ ಶ್ರೀ  ಚೇತನ್ ಹಾಗೂ ಶ್ರೀ ಲಕ್ಷ್ಮಣ್

 

...



ನಮ್ಮ ವಿಳಾಸ

ಕನ್ನಡ ಪುಸ್ತಕ ಪ್ರಾಧಿಕಾರ

ಕನ್ನಡ ಭವನ,
ಜೆ.ಸಿ.ರಸ್ತೆ, ಬೆಂಗಳೂರು-೫೬೦೦೦೨
ದೂರವಾಣಿ : ೦೮೦-೨೨೧೦೭೭೦೪

© 2020, ಕನ್ನಡ ಪುಸ್ತಕ ಪ್ರಾಧಿಕಾರ