ಸುದ್ದಿ ಸಮಾಚಾರ:
ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ ಹಾಗೂ ಶಾಲಾ ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದ ಚಿತ್ರಗಳು - ಹೆಚ್ಚಿನ ಮಾಹಿತಿಗೆ | ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ - ಹೆಚ್ಚಿನ ಮಾಹಿತಿಗೆ | ಪುಸ್ತಕ ಕೊಳ್ಳುವ ಬಗೆ... - ಹೆಚ್ಚಿನ ಮಾಹಿತಿಗೆ |

ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

ಪ್ರಕಟಿತ ವರ್ಷ : 02 Nov 2019 06:50 pm

ಕನ್ನಡರಾಜ್ಯೋತ್ಸವದ ಅಂಗವಾಗಿ 2019ರ ನವೆಂಬರ್‌ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ  ಮಾರಾಟ ಮಾಡಲಾಗುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ  ಪ್ರಕಟಣೆ ತಿಳಿಸಿದೆ.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ  ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ ಲೈನ್‌ ನಲ್ಲಿ ಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ.

ಇದಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಅಂತರ್ಜಾಲದಲ್ಲಿಯೂ ಕೂಡ ಶೇಕಡಾ 50%ರ ರಿಯಾಯಿತಿಯಲ್ಲಿ ಅಂದರೆ www.kannadapustakapradhikara.com ದಲ್ಲಿ ನಮ್ಮ ಪುಸ್ತಕಗಳು ವಿಭಾಗದಲ್ಲಿ ಆಯ್ಕೆ ಮಾಡಿ, ಆನ್ ಲೈನ್ ಮೂಲಕ ಹಣ ಪಾವತಿಸಿ  ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದಾಗಿದೆ.