ಸುದ್ದಿ ಸಮಾಚಾರ:
ಕನ್ನಡ ಮಾಧ್ಯಮ ಶಾಲೆಗಳಿಗೆ ಪುಸ್ತಕಗಳ ಉಚಿತ ವಿತರಣೆ - ಹೆಚ್ಚಿನ ಮಾಹಿತಿಗೆ | ಪುಸ್ತಕ ಸಂಸ್ಕೃತಿ - ಒಂದು ಅವಲೋಕನ - ಹೆಚ್ಚಿನ ಮಾಹಿತಿಗೆ | ೨೦೧೭ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿಗಳು - ಹೆಚ್ಚಿನ ಮಾಹಿತಿಗೆ | ೨೦೧೭ನೇ ಸಾಲಿನ ಪುಸ್ತಕ ಸೊಗಸು/ಮುದ್ರಣ ಸೊಗಸು ಬಹುಮಾನಗಳು - ಹೆಚ್ಚಿನ ಮಾಹಿತಿಗೆ |

ಎಲ್ಲ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿಯಲ್ಲಿ...

ಪ್ರಕಟಿತ ವರ್ಷ : 05 Jan 2018 07:01 pm

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು 360 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದು, ಈ ನಿಟ್ಟಿನಲ್ಲಿ 2018ರ ಜನವರಿ ಮಾಹೆಯಲ್ಲಿ ಮಾತ್ರ ತಿಂಗಳು ಪೂರ್ತಿ ಎಲ್ಲ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿಯಲ್ಲಿ ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎಲ್ಲಾ ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಜಿಲ್ಲಾವಾರು ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಮಾರಾಟಕ್ಕೆ ಲಭ್ಯವಿದೆ.

ಇದಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಅಂತರ್ಜಾಲದಲ್ಲಿಯೂ ಕೂಡ ಶೇಕಡಾ 50%ರ ರಿಯಾಯಿತಿಯಲ್ಲಿ ಅಂದರೆ www.kannadapustakapradhikara.com ದಲ್ಲಿ ನಮ್ಮ ಪುಸ್ತಕಗಳು ವಿಭಾಗದಲ್ಲಿ ಆಯ್ಕೆ ಮಾಡಿ, ಆನ್ ಲೈನ್ ಮೂಲಕ ಹಣ ಪಾವತಿಸಿ  ಪುಸ್ತಕಗಳನ್ನು ನೇರವಾಗಿ ಪಡೆಯಬಹುದಾಗಿದೆ.