ಸ್ವಾಗತ ನಿಮ್ಮ ಬುಟ್ಟಿ (0) | ಒಳಗೆ | ನೋಂದಾಯಿಸು
ಸುದ್ದಿ ಸಮಾಚಾರ:
ತಿಂಗಳ ಬೆಳಕು - ಹೆಚ್ಚಿನ ಮಾಹಿತಿಗೆ | ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ - ಹೆಚ್ಚಿನ ಮಾಹಿತಿಗೆ | ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಸಾಹಿತಿಗಳಿಗೆ ಚೊಚ್ಚಲ ಕೃತಿ ಪ್ರಕಟಣೆಗಾಗಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ - ಹೆಚ್ಚಿನ ಮಾಹಿತಿಗೆ | ಪುಸ್ತಕ ಕೊಳ್ಳುವ ಬಗೆ... - ಹೆಚ್ಚಿನ ಮಾಹಿತಿಗೆ |

ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಸಾಹಿತಿಗಳಿಗೆ ಚೊಚ್ಚಲ ಕೃತಿ ಪ್ರಕಟಣೆಗಾಗಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಪ್ರಕಟಿತ ವರ್ಷ : 01 Jan 2020 12:55 pm

ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವಬರಹಗಾರರ ಕನ್ನಡದ ಚೊಚ್ಚಲ ಕೃತಿ ಪ್ರಕಟಣೆಗೆ ರೂ.25,000-00 ಗಳ ಪ್ರೋತ್ಸಾಹಧನ ನೀಡುವ ಯೋಜನೆ ರೂಪಿಸಿದೆ. ಅದಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್‍.ಡಿ. ನಂಬರ್ಇರುವ ಜಾತಿ ಪ್ರಮಾಣ ಪತ್ರ, ಆದಾರ್ಕಾರ್ಡ್ಜೆರಾಕ್ಸ್ಪ್ರತಿ, ರೇಷನ್ಕಾರ್ಡ್ ಹಾಗೂ ಪಾನ್ಕಾರ್ಡ್‌‌ ಝೆರಾಕ್ಸ್ಪ್ರತಿ, ವಯಸ್ಸಿನ ದೃಢೀಕರಣಕ್ಕಾಗಿ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷಾ ಪ್ರಮಾಣ ಪತ್ರದ ಪ್ರತಿಯನ್ನು ಗೆಜೆಡಟೆಡ್ಅಧಿಕಾರಿಗಳಿಂದ ದೃಢೀಕರಿಸಿದ ಪ್ರತಿಗಳನ್ನು ಸಲ್ಲಿಸಬೇಕು. A4 ಸೈಜ್ ಹಾಳೆಯಲ್ಲಿ ಕನಿಷ್ಟ 100 ಪುಟಗಳಿರುವ ಡಿಟಿಪಿ ಮಾಡಿದ ಕೃತಿಯನ್ನು ಸಲ್ಲಿಸಬಹುದಾಗಿದೆ. 18 ರಿಂದ 40 ವರ್ಷದ ಒಳಗಿನ ಯಾವುದೇ ಲೇಖಕರೂ ಕೂಡ ಅರ್ಜಿಗಳನ್ನು ಸಲ್ಲಿಸಬಹುದು.

ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಕನ್ನಡ ಸಾಹಿತ್ಯ ಪ್ರಕಾರಗಳಲ್ಲಿ ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶೆ, ಲೇಖನ, ಲಲಿತ ಪ್ರಬಂಧ, ಮಕ್ಕಳ ಸಾಹಿತ್ಯ ಮತ್ತು ಪ್ರಬಂಧ (ಜೀವನ ಚರಿತ್ರೆ, ಪ್ರವಾಸ ಕಥನ ಮತ್ತು ಅಂಕಣ ಬರಹ), ಸಾಹಿತ್ಯ ಮಾನವಿಕ, ವಿಜ್ಞಾನ, ವಿಚಾರ ಹಾಗೂ ಇತರೆ ಜ್ಞಾನ ಶಿಸ್ತುಗಳ ವಿಚಾರಗಳಿಗೆ ಸಂಬಂಧಿಸಿರಬೇಕು.

ಅನುವಾದಗಳನ್ನು, ಪಠ್ಯ ಪುಸ್ತಕಗಳನ್ನು ಅಭಿನಂದನಾ ಗ್ರಂಥಗಳನ್ನು ಹಾಗೂ ಬೇರಾವುದೇ ಪದವಿಗಾಗಿ ಸಿದ್ಧಪಡಿಸಿರುವ ಪ್ರಬಂಧಗಳನ್ನು, ಯಾವುದೇ ಧರ್ಮ, ದೇವರು, ಜಾತಿ ಕೋಮು, ವೃತ್ತಿ ಸಮುದಾಯ, ಭಾಷೆ, ಆಚರಣೆ, ಪದ್ಧತಿ, ನಿರ್ದಿಷ್ಟ ಸಂಗತಿ, ರಾಷ್ಟ್ರೀಯ ನಾಯಕರು ಮುಂತಾದವುಗಳ ಕುರಿತು ನೇರವಾಗಿಯೇ ಆಗಲಿ ಪರೋಕ್ಷಗಾಗಿಯೇ ಆಗಲಿ ಮನನೋಯಿಸುವಂತಹ ಹಾಗೂ ರಾಷ್ಟ್ರೀಯ ಭಾವೈಕ್ಯತೆಗಳಿಗೆ  ಧಕ್ಕೆ ತರುವಂತಹ ಪ್ರಸ್ತಾಪ ಆಗಿದ್ದಲ್ಲಿ ಅವುಗಳನ್ನು ಪರಿಗಣಿಸಲಾಗುವುದಿಲ್ಲ.

ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560 002 - ಈ ವಿಳಾಸಕ್ಕೆ ದಿನಾಂಕ:25.01.2020ರ ಒಳಗಾಗಿ ಅರ್ಜಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ :
ಆಡಳಿತಾಧಿಕಾರಿಗಳು,
ಕನ್ನಡ ಪುಸ್ತಕ ಪ್ರಾಧಿಕಾರ,
ಕನ್ನಡ ಭವನ, ಮೊದಲನೇ ಮಹಡಿ,
ಜೆ.ಸಿ.ರಸ್ತೆ, ಬೆಂಗಳೂರು
ವೆಬ್ ಸೈಟ್ : www.kannadapustakapradhikara@gmail.com 
ದೂರವಾಣಿ ಸಂಖ್ಯೆ: 080-22484516 / 22017704  ಇಲ್ಲಿ ಸಂಪರ್ಕಿಸಬಹುದಾಗಿದೆ.

© 2020, ಕನ್ನಡ ಪುಸ್ತಕ ಪ್ರಾಧಿಕಾರ