ಸ್ವಾಗತ ನಿಮ್ಮ ಬುಟ್ಟಿ (0) | ಒಳಗೆ | ನೋಂದಾಯಿಸು
ಸುದ್ದಿ ಸಮಾಚಾರ:
ಪುಸ್ತಕ ಕೊಳ್ಳುವ ಬಗೆ... - ಹೆಚ್ಚಿನ ಮಾಹಿತಿಗೆ |

ಕನ್ನಡ ಪುಸ್ತಕ ಸೊಗಸು-2019 ಅರ್ಜಿ ಆಹ್ವಾನ

ಪ್ರಕಟಿತ ವರ್ಷ : 10 Mar 2020 05:55 pm

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ, ಜನವರಿ 2019 ರಿಂದ ಡಿಸೆಂಬರ್ 2019ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಬಹುಮಾನಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಕೃತಿಗಳ ಪ್ರಕಾಶಕರು / ಮುದ್ರಕರು / ಕಲಾವಿದರಿಗೆ ‘ಕನ್ನಡ ಪುಸ್ತಕ ಸೊಗಸು-2019’  ಬಹುಮಾನವನ್ನು ನೀಡಲಾಗುವುದು.

ಆಸಕ್ತ ಪ್ರಕಾಶಕರು /ಮುದ್ರಕರು/ ಕಲಾವಿದರು / ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ, ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ ಪೂರ್ಣ ವಿಳಾಸ – ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ದಿನಾಂಕ:04.04.2020ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 – ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ.  ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ.

 ಹೆಚ್ಚಿನ ಮಾಹಿತಿಗಾಗಿ :
ಆಡಳಿತಾಧಿಕಾರಿಗಳು,
ಕನ್ನಡ ಪುಸ್ತಕ ಪ್ರಾಧಿಕಾರ,
ಕನ್ನಡ ಭವನ, ಮೊದಲನೇ ಮಹಡಿ,
ಜೆ.ಸಿ. ರಸ್ತೆ, ಬೆಂಗಳೂರು -560002 –
ವೆಬ್‍ಸೈಟ್ www.kannadapustakapradhikara.com ,
ದೂರವಾಣಿ ಸಂಖ್ಯೆ: 080-22484516 / 22107704 – ಇಲ್ಲಿ ಸಂಪರ್ಕಿಸಬಹುದಾಗಿದೆ.

© 2020, ಕನ್ನಡ ಪುಸ್ತಕ ಪ್ರಾಧಿಕಾರ