ಸ್ವಾಗತ ನಿಮ್ಮ ಬುಟ್ಟಿ (0) | ಒಳಗೆ | ನೋಂದಾಯಿಸು
ಸುದ್ದಿ ಸಮಾಚಾರ:
ಶೋಕ ಸಂದೇಶ - ಹೆಚ್ಚಿನ ಮಾಹಿತಿಗೆ | ವಿವಿಧ ಪುಸ್ತಕಗಳ ಟೆಂಡರ್ ಪ್ರಕಟಣೆ - ಹೆಚ್ಚಿನ ಮಾಹಿತಿಗೆ | ಪುಸ್ತಕಗಳನ್ನು ಕೊಂಡುಕೊಳ್ಳುವ ಬಗೆ - ಹೆಚ್ಚಿನ ಮಾಹಿತಿಗೆ | ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ - ಹೆಚ್ಚಿನ ಮಾಹಿತಿಗೆ |

 ‘ಕನ್ನಡ ಪುಸ್ತಕ ಸೊಗಸು-2019’ ಬಹುಮಾನಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಿಸುವ ಬಗ್ಗೆ

ಪ್ರಕಟಿತ ವರ್ಷ : 08 May 2020 07:43 pm

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ, ಜನವರಿ 2019 ರಿಂದ ಡಿಸೆಂಬರ್ 2019 ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಬಹುಮಾನಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಕೋವಿಡ್-19ರ ಪರಿಸ್ಥಿ ಹಿನ್ನೆಲೆಯಲ್ಲಿ ಪುಸ್ತಕ ಕಳಿಸುವ ಕೊನೆ ದಿನಾಂಕವನ್ನು 30 ಮೇ 2020ರ ವರೆಗೆ ವಿಸ್ತರಿಸಲಾಗಿದೆ 

ಆಸಕ್ತ ಪ್ರಕಾಶಕರು /ಮುದ್ರಕರು/ ಕಲಾವಿದರು / ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ, ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ ಪೂರ್ಣ ವಿಳಾಸ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ದಿನಾಂಕ:30.05.2020ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 – ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ.  ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ :
ಆಡಳಿತಾಧಿಕಾರಿಗಳು,
ಕನ್ನಡ ಪುಸ್ತಕ ಪ್ರಾಧಿಕಾರ,
ಕನ್ನಡ ಭವನ,
ಮೊದಲನೇ ಮಹಡಿ,
ಜೆ.ಸಿ.ರಸ್ತೆ,
ಬೆಂಗಳೂರು-560 002
ವೆಬ್ ಸೈಟ್  www.kannadapustakapradhikara.com,
ದೂರವಾಣಿ ಸಂಖ್ಯೆ: 080-22484516 / 22107704 – ಇಲ್ಲಿ ಸಂಪರ್ಕಿಸಬಹುದಾಗಿದೆ.  

ತಮ್ಮ ವಿಶ್ವಾಸಿ,

(ಕೆ.ಬಿ. ಕಿರಣ್‌ ಸಿಂಗ್‌)
ಆಡಳಿತಾಧಿಕಾರಿ

© 2020, ಕನ್ನಡ ಪುಸ್ತಕ ಪ್ರಾಧಿಕಾರ