ಸ್ವಾಗತ ನಿಮ್ಮ ಬುಟ್ಟಿ (0) | ಒಳಗೆ | ನೋಂದಾಯಿಸು
ಸುದ್ದಿ ಸಮಾಚಾರ:
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ಸಿ.ಟಿ. ರವಿ ಅವರು ಇಂದು ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಗತಿ ಪರಿಶೀಲನೆ ನಡೆಸಿದರು - ಹೆಚ್ಚಿನ ಮಾಹಿತಿಗೆ | ಪುಸ್ತಕ ಕೊಳ್ಳುವ ಬಗೆ... - ಹೆಚ್ಚಿನ ಮಾಹಿತಿಗೆ |

ಗೀತಾ ನಾಗಭೂಷಣ ಅವರ ನಿಧನಕ್ಕೆ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರ ಸಂತಾಪ

ಪ್ರಕಟಿತ ವರ್ಷ : 29 Jun 2020 12:59 pm

ಕನ್ನಡದ ಹಿರಿಯ ಸಾಹಿತಿ ಶ್ರೀಮತಿ ಗೀತಾ ನಾಗಭೂಷಣ ಅವರ ನಿಧನಕ್ಕೆ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಎಂ. ಎನ್. ನಂದೀಶ್ ಹಂಚೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಗೀತಾ ನಾಗಭೂಷಣ ಅವರು ಕನ್ನಡ ಸಾಹಿತ್ಯಲೋಕ ಕಂಡ ಪ್ರಗತಿಪರ ಚಿಂತನೆಯ ಲೇಖಕರಲ್ಲಿ ಒಬ್ಬರಾಗಿದ್ದರು. ಮಹಿಳಾ ಸಂವೇದನೆಯನ್ನು ಅವರಷ್ಟು ಶಕ್ತಿಯುತವಾಗಿ ಪ್ರತಿಪಾದಿಸಿದವರು ವಿರಳ. ಹಿಂದುಳಿದ ವರ್ಗಗಳ ಬಡಜನರ ತಲ್ಲಣಗಳನ್ನು, ವಿಶೇಷವಾಗಿ ಮಹಿಳೆಯರ ಮೇಲಿನ ದಬ್ಬಾಳಿಕೆಯನ್ನು ಅವರು ತಮ್ಮ ಕಾದಂಬರಿಗಳಲ್ಲಿ ಪರಿಣಾಮಕಾರಿಯಾಗಿ ಚಿತ್ರಿಸಿದ್ದರು. ಅವರ 'ಬದುಕು' ಹಾಗೂ 'ಹಸಿಮಾಂಸ ಮತ್ತು ರಣಹದ್ದುಗಳು' ಕಾದಂಬರಿಗಳು ಸದಾ ಕಾಡುತ್ತದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಅವರು ಮಾಡಿದ ಭಾಷಣ ಸದಾ ನೆನಪಿರುವಂತಹದು. ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಅವರು ಮಾಡಿದ ಕೆಲಸ ಸ್ಮರಣಾರ್ಹ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಸೇರಿದಂತೆ ಅನೇಕ ಪ್ರತಿಷ್ಠಿತ ಪುರಸ್ಕಾರಗಳು ಅವರಿಗೆ ಲಭಿಸಿದ್ದವು. ಅವರ ನಿಧನದಿಂದ ಕನ್ನಡ ಪುಸ್ತಕ ಲೋಕ ಪ್ರಖರ ಚಿಂತನೆಯ ಲೇಖಕರನ್ನು ಕಳೆದುಕೊಂಡಂತಾಗಿದೆ ಎಂದು ಡಾ. ಎಂ.ಎನ್. ನಂದೀಶ್ ಹಂಚೆ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಕೆ.ಬಿ.ಕಿರಣ್ ಸಿಂಗ್
ಆಡಳಿತ ಅಧಿಕಾರಿಗಳು
ಕನ್ನಡ ಪುಸ್ತಕ ಪ್ರಾಧಿಕಾರ
ಬೆಂಗಳೂರು

© 2020, ಕನ್ನಡ ಪುಸ್ತಕ ಪ್ರಾಧಿಕಾರ