ಸುದ್ದಿ ಸಮಾಚಾರ:
ಪುಸ್ತಕ ಪ್ರಕಾಶನ - ವಿಚಾರ ಸಂಕಿರಣ - ಹೆಚ್ಚಿನ ಮಾಹಿತಿಗೆ | ಕನ್ನಡ ಪುಸ್ತಕ ಪ್ರಾಧಿಕಾರವು 5 ಯೋಜನೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30.06.2018 - ಹೆಚ್ಚಿನ ಮಾಹಿತಿಗೆ | ಪುಸ್ತಕ ಕೊಳ್ಳುವ ಬಗೆ... - ಹೆಚ್ಚಿನ ಮಾಹಿತಿಗೆ |

ಪ್ರಕಾಶಕರ ನೊಂದಣಿ ಅರ್ಜಿ

ಪ್ರಕಟಿತ ವರ್ಷ : 24 Feb 2018 10:56 am

ರಾಜ್ಯದಲ್ಲಿ ನೂರಾರು ಪ್ರಕಾಶಕರು ಇದ್ದು, ದಿನವಹಿ ಹತ್ತಾರು ಪುಸ್ತಕಗಳ ಪ್ರಕಟಣೆಯಾಗುತ್ತಿದೆ. ರಾಜ್ಯದಲ್ಲಿ ಪ್ರಕಟಿತ ಪುಸ್ತಕಗಳ ಹಾಗೂ ಪುಸ್ತಕ ಪ್ರಕಾಶಕರ ವಿವರಗಳು ಒಂದೆಡೆ ಲಭ್ಯವಾದಲ್ಲಿ ಸಾಹಿತ್ಯಾಸಕ್ತರಿಗೆ ಅನುಕೂಲವಾಗುವ ದೃಷ್ಟಿಕೋನದಿಂದ, ಕನ್ನಡ ಪುಸ್ತಕ ಪ್ರಾಧಿಕಾರವು ಪ್ರಕಾಶಕರ ನೊಂದಣಿ ಯೋಜನೆಯೊಂದನ್ನು ಆರಂಭಿಸುತ್ತಿದೆ. ಈ ದಿಸೆಯಲ್ಲಿ ರಾಜ್ಯದೆಲ್ಲೆಡೆಯಲ್ಲಿರುವ ಪ್ರಕಾಶಕರು ಕನ್ನಡ ಪುಸ್ತಕ ಪ್ರಾಧಿಕಾರದಲ್ಲಿ ಹೆಸರು ನೊಂದಾಯಿಸಿ ಕೊಳ್ಳಲು ಕೋರಿದೆ.

 ನಿಗದಿತ ಅರ್ಜಿ ನಮೂನೆಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯನ್ನು ಅಥವಾ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‍ಸೈಟ್‍ www.kannadapustakapradhikara.com ನಲ್ಲಿ ಅರ್ಜಿಯನ್ನು ಪಡೆಯಬಹುದಾಗಿದೆ. ಅರ್ಜಿಗಳನ್ನು 
ಆಡಳಿತಾಧಿಕಾರಿಗಳು, 
ಕನ್ನಡ ಪುಸ್ತಕ ಪ್ರಾಧಿಕಾರ, 
ಕನ್ನಡ ಭವನ, 
ಜೆ.ಸಿ.ರಸ್ತೆ, 
ಬೆಂಗಳೂರು 
ಅವರಿಗೆ ಕಳುಹಿಸಿಕೊಡಲು ಕೋರಿದೆ.