ಸುದ್ದಿ ಸಮಾಚಾರ:
೨೦೧೭ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿಗಳು - ಹೆಚ್ಚಿನ ಮಾಹಿತಿಗೆ | ೨೦೧೭ನೇ ಸಾಲಿನ ಪುಸ್ತಕ ಸೊಗಸು/ಮುದ್ರಣ ಸೊಗಸು ಬಹುಮಾನಗಳು - ಹೆಚ್ಚಿನ ಮಾಹಿತಿಗೆ | ದನಿ ಹೊತ್ತಿಗೆ - ಹೆಚ್ಚಿನ ಮಾಹಿತಿಗೆ | ಇ-ಪುಸ್ತಕ - ಹೆಚ್ಚಿನ ಮಾಹಿತಿಗೆ |

ಕನ್ನಡ ಪುಸ್ತಕ ಪ್ರಾಧಿಕಾರವು 5 ಯೋಜನೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30.06.2018

ಪ್ರಕಟಿತ ವರ್ಷ : 09 Jun 2018 03:16 pm

ಕನ್ನಡ ಪುಸ್ತಕ ಪ್ರಾಧಿಕಾರವು 5 ಯೋಜನೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30.06.2018.

  1. ಕಾಲೇಜುಗಳಿಗೆ ಜಾಣ ಜಾಣೆಯರ ಬಳಗ ರಚನೆಗೆ ಅರ್ಜಿ ಆಹ್ವಾನ
  2. ಪ್ರೌಢಶಾಲೆಗಳಿಗೆ ಅಚ್ಚು ಮೆಚ್ಚಿನ ಪುಸ್ತಕ / ರಸಪ್ರಶ್ನೆ ಕಾರ್ಯಕ್ರಮ ನಡೆಸಲು ಅರ್ಜಿ ಆಹ್ವಾನ
  3. ದಲಿತ ಸಾಹಿತಿಗಳಿಗೆ ಪುಸ್ತಕ ಪ್ರಕಟಣೆಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.
  4. 2017ನೆಯ ಸಾಲಿನ ಪ್ರಕಟಿತ ಪುಸ್ತಕಗಳನ್ನು ಪುಸ್ತಕ ಸೊಗಸು ಆಯ್ಕೆಗೆ ಆಹ್ವಾನ.
  5. 2017ನೆಯ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗೆ ಹಸ್ತಪ್ರತಿಗಳ ಆಯ್ಕೆಗೆ ಅರ್ಜಿ ಆಹ್ವಾನ

ವಿವರಗಳಿಗೆ ಮುಂದೆ ಓದಿರಿ.


2017ನೇ ಸಾಲಿಗೆ ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹ ಧನ

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2017ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು, ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿದಾರರು ಕನಿಷ್ಟ 18 ರಿಂದ 35 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.

ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ. ಮಾಡಿದ್ದು 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೆ ರಾಷ್ಟ್ರೀಯ ಭಾವೈಕ್ಯತೆಗೆ ದಕ್ಕೆ ತರುವಂತಹ ವಿಷಯ / ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಆದ ಕಾರಣ ಹಸ್ತಪ್ರತಿಯ / ಡಿ.ಟಿ.ಪಿ. ಪ್ರತಿಯ ಎರಡನೇ ಪ್ರತಿಯನ್ನು ಸಲ್ಲಿಸಲು ತಿಳಿಸಿದೆ.

ಅರ್ಜಿಗಳನ್ನು ದಿನಾಂಕ:30.06.2018ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560 002 – ಅವರಿಗೆ ಕಳುಹಿಸಿಕೊಡಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ : ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು – ದೂರವಾಣಿ ಸಂಖ್ಯೆ: 080-22484516 / 22017704 – ಇಲ್ಲಿ ಸಂಪರ್ಕಿಸಬಹುದಾಗಿದೆ. ಅಥವಾ ಪ್ರಾಧಿಕಾರದ ವೈಬ್ ಸೈಟ್: www.kannadapustakapradhikara.com / ಪೇಸ್ ಬುಕ್ ಅನ್ನು ಅವಲೋಕಿಸಬಹುದಾಗಿದೆ.


2017ನೇ ಸಾಲಿನ ಪುಸ್ತಕ ಸೊಗಸು ಬಹುಮಾನ

             ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ, ಜನವರಿ 2017 ರಿಂದ ಡಿಸೆಂಬರ್ 2017 ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ, ಕಲಾವಿದರು / ಲೇಖಕರು / ಪ್ರಕಾಶಕರಿಗೆ ಕನ್ನಡ ಪುಸ್ತಕ ಸೊಗಸು-2017’ (ಪ್ರಥಮ, ದ್ವಿತೀಯ, ತೃತೀಯ, ಮಕ್ಕಳ ಪುಸ್ತಕ, ಮುಖಪುಟ ಚಿತ್ರ ವಿನ್ಯಾಸದ ಪ್ರಥಮ, ಮುಖಪುಟ ಚಿತ್ರ ಕಲೆಯ ದ್ವಿತೀಯ) ಬಹುಮಾನಗಳನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಪ್ರಕಾಶಕರು / ಕಲಾವಿದರು / ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ, ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ ಪೂರ್ಣ ವಿಳಾಸ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ದಿನಾಂಕ:30.06.2018 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 – ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ.  ತಾವು ನೀಡಿದ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ : ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು -560002 – ವೆಬ್ಸೈಟ್ www.kannadapustakapradhikara.com , ದೂರವಾಣಿ ಸಂಖ್ಯೆ: 080-22484516 / 22107704 – ಇಲ್ಲಿ ಸಂಪರ್ಕಿಸಬಹುದಾಗಿದೆ.


ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತಿಗಳಿಗೆ ಕೃತಿ ಪ್ರಕಟಿಸಲು ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ.

ಕನ್ನಡ ಪುಸ್ತಕ ಪ್ರಾಧಿಕಾರವು ದಲಿತ ಸಾಹಿತಿಗಳ ಕೃತಿ ಪ್ರಕಟಣೆಗೆ ತಲಾ ರೂ.35,000-00ಗಳ ಪ್ರೋತ್ಸಾಹಧನ ನೀಡುವ ಯೋಜನೆ ರೂಪಿಸಿದ್ದು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್‍.ಡಿ. ನಂಬರ್‍ ಇರುವ ಜಾತಿ ಪ್ರಮಾಣ ಪತ್ರದೊಂದಿಗೆ A4 ಸೈಜ್ ಹಾಳೆಯಲ್ಲಿ ಡಿ.ಟಿ.ಪಿ. ಮಾಡಿದ ಕನಿಷ್ಟ 200 ಪುಟಗಳಿರುವ ಕೃತಿಯನ್ನು ಸಲ್ಲಿಸಬಹುದಾಗಿದೆ. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಸಾಹಿತ್ಯ, ಮಾನವಿಕ, ವಿಜ್ಞಾನ ವಿಚಾರ ಸಾಹಿತ್ಯ ಹಾಗೂ ಇತರ ಜ್ಞಾನ ಶಿಸ್ತುಗಳ ವಿಚಾರಗಳಿಗೆ ಸಂಬಂಧಿಸಿದ್ದಾಗಿದ್ದು, ಅನುವಾದಗಳನ್ನು, ಪಠ್ಯ ಪುಸ್ತಕಗಳನ್ನು ಹಾಗೂ ಬೇರಾವುದೇ ಪದವಿಗಾಗಿ ಸಿದ್ಧಪಡಿಸಿರುವ ಪ್ರಬಂಧಗಳನ್ನು ಪರಿಗಣಿಸಲಾಗುವುದಿಲ್ಲ.

ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೆ ರಾಷ್ಟ್ರೀಯ ಭಾವೈಕ್ಯತೆಗೆ ದಕ್ಕೆ ತರುವಂತಹ ವಿಷಯ / ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಒಬ್ಬ ಲೇಖಕರ ಒಂದು ಪ್ರತಿಯನ್ನು ಮಾತ್ರ ಆಯ್ಕೆಗಾಗಿ ಪರಿಗಣಿಸಲಾಗುವುದು. ಈಗಾಗಲೇ ಸಾಕಷ್ಟು ಕೃತಿಗಳು ಪ್ರಕಟವಾಗಿರುವ ಲೇಖಕರೂ ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560 002 - ಈ ವಿಳಾಸಕ್ಕೆ ದಿನಾಂಕ:30.06.2018ರ ಒಳಗಾಗಿ ಅರ್ಜಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ : ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು – ವೆಬ್ ಸೈಟ್ : www.kannadapustakapradhikara@gmail.com - ದೂರವಾಣಿ ಸಂಖ್ಯೆ: 080-22484516 / 22017704  ಇಲ್ಲಿ ಸಂಪರ್ಕಿಸಬಹುದಾಗಿದೆ.


ಜಾಣ ಜಾಣೆಯರ ಬಳಗಕ್ಕೆ ಅರ್ಜಿ ಆಹ್ವಾನ

ವಿಷಯಕ್ಕೆ ಸಂಬಂಧಿಸಿದಂತೆ, ಕನ್ನಡ ಪುಸ್ತಕ ಪ್ರಾಧಿಕಾರವು ವಿದ್ಯಾರ್ಥಿ ಯುವಜನರನ್ನು ಸಾಹಿತ್ಯಾಭಿರುಚಿಗೆ ಆಕರ್ಷಿಸಲು ಹಾಗೂ ಸಾಹಿತ್ಯದ ಕ್ರಿಯಾಶೀಲತೆಯನ್ನು ಬೆಳೆಸಲು ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ಜಾಣ ಜಾಣೆಯರ ಬಳಗವನ್ನು ರಚಿಸಲು ಅರ್ಜಿಗಳನ್ನು ಆಹ್ವಾನಿಸಿದೆ.ಕನಿಷ್ಟ 5 ರಿಂದ 15 ಮಂದಿ ವಿದ್ಯಾರ್ಥಿಗಳನ್ನೊಳಗೊಂಡಂತೆ ಕಾರ್ಯಕಾರಿ ಸಮಿತಿಯೊಂದನ್ನು ರಚಿಸಿಕೊಂಡು, ಆಯಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಕನ್ನಡ ವಿಭಾಗಗಳ ಮುಖ್ಯಸ್ಥರ ಅನುಮೋದನೆಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕಾಲೇಜಿನಲ್ಲಿ ಕನ್ನಡ ಸಾಹಿತ್ಯಿಕ ವಾತಾವರಣವನ್ನು ಕ್ರಿಯಾಶೀಲವಾಗಿಡುವ ನಿಟ್ಟಿನಲ್ಲಿ ವರ್ಷದಲ್ಲಿ 4 ಕಾರ್ಯಕ್ರಮಗಳಂತೆ ಕನ್ನಡ ಸಾಹಿತ್ಯ ಚಟುವಟಿಕೆಯನ್ನು ಬಳಗವು ಹಮ್ಮಿಕೊಳ್ಳುತ್ತದೆ. ಇದಕ್ಕಾಗಿ ಪ್ರಾಧಿಕಾರದಿಂದ ಕಾರ್ಯಕ್ರಮ ಒಂದಕ್ಕೆ ರೂ.5,000-00ಗಳ ಗರಿಷ್ಟ ಮಿತಿಯೊಳಗೆ ವಾಸ್ತವಿಕ ವೆಚ್ಚವನ್ನು ಭರಿಸಲಾಗುವುದು. ಇದಲ್ಲದೆ ಪ್ರಾಧಿಕಾರವು ಹಮ್ಮಿಕೊಳ್ಳುವ ಎಲ್ಲಾ ಯೋಜನೆ ಹಾಗೂ ಕಾರ್ಯಕ್ರಮಗಳಲ್ಲಿ ಜಾಣ ಜಾಣೆಯರ ಬಳಗವನ್ನು ತೊಡಗಿಸಿಕೊಳ್ಳಲಾಗುವುದು. ಅರ್ಜಿ ಸಲ್ಲಿಸಲು ಕಡೆಯ ದಿನಾಂಕ:30.06.2018.

ನಿಗದಿತ ಅರ್ಜಿ ನಮೂನೆಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯನ್ನು ಅಥವಾ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್ಸೈಟ್www.kannadapustakapradhikara.com ನಲ್ಲಿ ಅರ್ಜಿಯನ್ನು ಪಡೆಯಬಹುದಾಗಿದೆ. ಅರ್ಜಿಗಳನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560 002, ದೂರವಾಣಿ ಸಂಖ್ಯೆ: 080-22107704 / 22484516 ಅವರಿಗೆ ಕಳುಹಿಸಿಕೊಡಲು ಕೋರಿದೆ.

ಜಾಣ ಜಾಣೆಯರ ಬಳಗ ಅರ್ಜಿ ನಮೂನೆ 2018-19


ಪ್ರೌಢಶಾಲೆಗಳಲ್ಲಿ  ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಅಥವಾ ರಸಪ್ರಶ್ನೆ ಕಾರ್ಯಕ್ರಮ

 ಕನ್ನಡ ಪುಸ್ತಕ ಪ್ರಾಧಿಕಾರವು ರಾಜ್ಯದಾದ್ಯಂತ  ಪ್ರೌಢಶಾಲೆಗಳಲ್ಲಿ ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಅಥವಾ ರಸಪ್ರಶ್ನೆ ಕಾರ್ಯಕ್ರಮ” ಏರ್ಪಡಿಸುವ  ಕುರಿತು ಯೋಜನೆಯನ್ನು ಹಮ್ಮಿಕೊಂಡಿದೆ. ಈ ಯೋಜನೆಯಡಿ   ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢ ಶಾಲೆಗಳು ತಮ್ಮ ತಮ್ಮ ಶಾಲೆಗಳಲ್ಲಿ ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಹಾಗೂ ರಸಪ್ರಶ್ನೆಯ ಒಂದು ಕಾರ್ಯಕ್ರಮ ಏರ್ಪಡಿಸಬಹುದಾಗಿದೆ. ಈ ಕಾರ್ಯಕ್ರಮವನ್ನು ನಡೆಸುವ ಸಲುವಾಗಿ ಪ್ರಾಧಿಕಾರವು ರೂ. 5೦೦೦-೦೦ಗಳ  ಗರಿಷ್ಟ ಮಿತಿಯೊಳಗೆ ವಾಸ್ತವಿಕ ವೆಚ್ಚವನ್ನು ಭರಿಸುವುದು. ತಮ್ಮ ಶಾಲಾ ವಿವರಗಳೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಬಹುದಾದ ದಿನಾಂಕ, ಆಹ್ವಾನಿಸುವ ಇಬ್ಬರು ತೀರ್ಪುಗಾರರ ಹೆಸರು ಇತ್ಯಾದಿ ವಿವರಗಳೊಂದಿಗೆ ಆಯಾ ಶಾಲಾ ಮುಖ್ಯಸ್ಥರು ಸ್ವಯಂ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ.30.06.2018. ಕಾರ್ಯಕ್ರಮದ ಮುನ್ನ ಪ್ರಾಧಿಕಾರದಿಂದ ಪೂರ್ವಾನುಮೋದನೆ ಪಡೆಯುವುದು ಕಡ್ಡಾಯ.

               ಅರ್ಜಿಗಳನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002, ದೂರವಾಣಿ ಸಂಖ್ಯೆ: 080-22484516 / 22107704 ಇವರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ  ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಛೇರಿಯನ್ನು ಅಥವಾ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್ ಸೈಟ್ www.kannadapustakapradhikara.com ನ್ನು ಸಂಪರ್ಕಿಸಬಹುದಾಗಿದೆ,