ಮೈಸೂರು ದಸರಾ ಕನ್ನಡ ಪುಸ್ತಕ ಮೇಳ-೨೦೧೪ರಲ್ಲಿ ಕನ್ನಡ ಪುಸ್ತಕ ಪ್ರಕಾಶಕರು ಭಾಗವಹಿಸುವ ಬಗ್ಗೆ.

ಮೈಸೂರು ದಸರಾ ಕನ್ನಡ ಪುಸ್ತಕ ಮೇಳ-೨೦೧೪ರಲ್ಲಿ ಕನ್ನಡ ಪುಸ್ತಕ ಪ್ರಕಾಶಕರು ಭಾಗವಹಿಸುವ ಬಗ್ಗೆ.

ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸದಲ್ಲಿ ೨೦೧೪ನೇ ಸಾಲಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ:೨೫.೦೯.೨೦೧೪ ರಿಂದ ೦೪.೧೦.೨೦೧೪ರವರೆಗೆ ಮೈಸೂರಿನ ಕಾಡಾ ಮೈದಾನದಲ್ಲಿ ದಸರಾ ಕನ್ನಡ ಪುಸ್ತಕ ಮೇಳ-೨೦೧೪ನ್ನು ಏರ್ಪಡಿಸಲಾಗಿದೆ.

ದಸರಾ ಕನ್ನಡ ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಕನ್ನಡ ಪುಸ್ತಕ ಪ್ರಕಾಶಕರು ಅರ್ಜಿ ನಮೂನೆಗಳನ್ನು ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್ ಸೈಟ್ http://kannadapustakapradhikara.com/application-2014.pdf ರಲ್ಲಿ ಪಡೆಯಬಹುದಾಗಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಕಚೇರಿ, ಜೆ.ಸಿ.ರಸ್ತೆ, ಬೆಂಗಳೂರಿನಲ್ಲಿ ಪಡೆಯುಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ : ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-೫೬೦ ೦೦೨ ದೂ:೦೮೦-೨೨೪೮೪೫೧೬ / ೨೨೧೦೭೭೦೪ ಅನ್ನು ಸಂಪರ್ಕಿಸಬಹುದಾಗಿದೆ.

ಪ್ರಕಟಿತ ಪುಸ್ತಕಗಳು
ಚಿತ್ರಗಳು