ಕನ್ನಡ ಪುಸ್ತಕ ಪ್ರಾಧಿಕಾರದಲ್ಲಿ ರಾಜ್ಯದ ಎಲ್ಲಾ ಪ್ರಕಾಶಕರ ನೊಂದಣಿಗಾಗಿ ಅರ್ಜಿ ಆಹ್ವಾನಿಸಿರುವ ಬಗ್ಗೆ.

ಕನ್ನಡ ಪುಸ್ತಕ ಪ್ರಾಧಿಕಾರದಲ್ಲಿ ರಾಜ್ಯದ ಎಲ್ಲಾ ಪ್ರಕಾಶಕರ ನೊಂದಣಿಗಾಗಿ ಅರ್ಜಿ ಆಹ್ವಾನಿಸಿರುವ ಬಗ್ಗೆ.

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪುಸ್ತಕಗಳ ಬಗ್ಗೆ ಸಾರ್ವಜನಿಕರಲ್ಲಿ ಆಸಕ್ತಿಯನ್ನು, ಓದುವ ಮನೋಭಾವವನ್ನು ಮೂಡಿಸುವ ಸಂಬಂಧವಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡು ಅನುಷ್ಠಾನಕ್ಕೆ ತರುತ್ತಿದೆ.

ರಾಜ್ಯದಲ್ಲಿ ನೂರಾರು ಪ್ರಕಾಶಕರು ಇದ್ದು, ದಿನವಹಿ ಹತ್ತಾರು ಪುಸ್ತಕಗಳ ಪ್ರಕಟಣೆಯಾಗುತ್ತಿದೆ. ರಾಜ್ಯದಲ್ಲಿ ಪ್ರಕಟಿತ ಪುಸ್ತಕಗಳ ಹಾಗೂ ಪುಸ್ತಕ ಪ್ರಕಾಶಕರ ವಿವರಗಳು ಒಂದೆಡೆ ಲಭ್ಯವಾದಲ್ಲಿ ಸಾಹಿತ್ಯಾಸಕ್ತರಿಗೆ ಅನುಕೂಲವಾಗುವ ದೃಷ್ಟಿಕೋನದಿಂದ ಕನ್ನಡ ಪುಸ್ತಕ ಪ್ರಾಧಿಕಾರವು ಪ್ರಕಾಶಕರ ನೋಂದಣಿ ಯೋಜನೆಯೊಂದನ್ನು ಆರಂಭಿಸುತ್ತಿದೆ. ಈ ದಿಸೆಯಲ್ಲಿ ರಾಜ್ಯದೆಲ್ಲೆಡೆಯಲ್ಲಿರುವ ಪ್ರಕಾಶಕರು ತಮ್ಮ ಹೆಸರು / ವಿವರಗಳು ಮತ್ತು ತಮ್ಮಿಂದ ಈವರೆಗೆ ಪ್ರಕಟಿತವಾಗಿರುವ ಎಲ್ಲಾ ಪುಸ್ತಕಗಳ ಶೀರ್ಷಿಕೆ, ಪುಟ ಸಂಖ್ಯೆ, ಬೆಲೆ, ರಿಯಾಯಿತಿದರ ಇತ್ಯಾದಿಗಳ ವಿವರಗಳನ್ನು ತಮ್ಮ ಎರಡು ಇತ್ತೀಚಿನ ಸ್ಟಾಂಪ್ ಸೈಜ್ ಭಾವಚಿತ್ರದೊಂದಿಗೆ ಅರ್ಜಿಗಳನ್ನು, ದಿನಾಂಕ:೩೦.೦೯.೨೦೧೪ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು - ೫೬೦ ೦೦೨ - ಅವರಿಗೆ ಕಳುಹಿಸಿಕೊಡಲು ಕೋರಿದೆ.


ಈ ಸಂಬಂಧ ಅರ್ಜಿ ನಮೂನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದಾಗಿದೆ. ಅಲ್ಲದೆ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಂದರೆ www.kannadapustakapradhikara.com/prakashakaru.pdf ಪಡೆಯಬಹುದಾಗಿದೆ. ವಿವರಗಳನ್ನು ಪ್ರಾಧಿಕಾರದ Email id kannadappradhikara@gmail.comಗೆ ಕಳುಹಿಸಿ, ನಂತರ ಭಾವಚಿತ್ರದೊಂದಿಗೆ ಅರ್ಜಿಯನ್ನು ಅಂಚೆ ಮೂಲಕ ರವಾನಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ : ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು - ದೂರವಾಣಿ ಸಂಖ್ಯೆ: ೦೮೦-೨೨೪೮೪೫೧೬ / ೨೨೦೧೭೭೦೪ - ಇಲ್ಲಿ ಸಂಪರ್ಕಿಸಬಹುದಾಗಿದೆ.

ಪ್ರಕಟಿತ ಪುಸ್ತಕಗಳು
ಚಿತ್ರಗಳು