ರಿಯಾಯಿತಿ ಕನ್ನಡ ಪುಸ್ತಕ ಮೇಳ-೨೦೧೫ರ ಮಳಿಗೆಗಳ ಅರ್ಜಿ ನಮೂನೆ

ಕನ್ನಡ ಪುಸ್ತಕ ಪ್ರಾಧಿಕಾರದಿಂದ ಚಾಮರಾಜನಗರದ ಚಾಮರಾಜೇಂದ್ರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ದಿನಾಂಕ:೨೬.೦೬.೨೦೧೫ ರಿಂದ ೩೦.೦೬.೨೦೧೫ರ ವರೆಗೆ ಒಟ್ಟು ಐದು ದಿನಗಳ ಕಾಲ ’ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳ-೨೦೧೫’ನ್ನು ಹಮ್ಮಿಕೊಳ್ಳಲಾಗಿದೆ.

ಈ ಪುಸ್ತಕ ಮೇಳದಲ್ಲಿ ಪ್ರಕಾಶನ ಸಂಸ್ಥೆಗಳು/ಪ್ರದರ್ಶಕರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.೧,೦೦೦-೦೦ಗಳ ಬಾಡಿಗೆ ಹಾಗೂ ರೂ.೧,೦೦೦-೦೦ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಪ್ರತ್ಯೇಕ - ಪ್ರತ್ಯೇಕವಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು - ಅವರ ಹೆಸರಿನಲ್ಲಿ ಸಲ್ಲಿಸುವುದು.

ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಪ್ರದರ್ಶಕರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅರ್ಜಿಯನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.

ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ದಿನಾಂಕ:೨೦.೦೬.೨೦೧೫ ರಂದು ಸಂಜೆ ೫.೩೦ರೊಳಗೆ ಆಡಳಿತಾಧಿಕಾರಿಗಳು,

ಹೆಚ್ಚಿನ ಮಾಹಿತಿಗಾಗಿ :
ಆಡಳಿತಾಧಿಕಾರಿಗಳು,
ಕನ್ನಡ ಪುಸ್ತಕ ಪ್ರಾಧಿಕಾರ,
ಕನ್ನಡ ಭವನ, ಜೆ.ಸಿ.ರಸ್ತೆ,
ಬೆಂಗಳೂರು-೫೬೦ ೦೦೨
ದೂ:೦೮೦-೨೨೪೮೪೫೧೬ / ೨೨೧೦೭೭೦೪ ಅನ್ನು ಸಂಪರ್ಕಿಸಬಹುದಾಗಿದೆ.

ಪ್ರಕಟಿತ ಪುಸ್ತಕಗಳು
ಚಿತ್ರಗಳು