ಕನ್ನಡ ಪುಸ್ತಕ ಸೊಗಸು ಬಹುಮಾನ -೨೦೧೪ನೇ ಸಾಲಿನ ಅರ್ಜಿ ಆಹ್ವಾನ

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ, ೨೦೧೪ನೇ ಸಾಲಿನಲ್ಲಿ (ಜನವರಿ ೨೦೧೪ ರಿಂದ ಡಿಸೆಂಬರ್ ೨೦೧೪ರ ಅವಧಿಯಲ್ಲಿ ಪ್ರಕಟವಾದ ಕೃತಿಗಳು) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ, ಪ್ರಕಾಶಕರಿಗೆ ೨೦೧೪ನೇ ಸಾಲಿನ ’ಕನ್ನಡ ಪುಸ್ತಕ ಸೊಗಸು-೨೦೧೪’ ಬಹುಮಾನಗಳನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

(ಪ್ರಥಮ, ದ್ವಿತೀಯ, ತೃತೀಯ, ಚತುರ್ಥ, ಐದನೆಯ ಹಾಗೂ ಮಕ್ಕಳ ಪುಸ್ತಕಗಳಿಗೆ ಬಹುಮಾನಗಳು) ಆಸಕ್ತರು ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುಖಪುಟ ವಿನ್ಯಾಸಕರ ಹೆಸರು ಹಾಗೂ ಪೂರ್ಣ ವಿಳಾಸ - ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ದಿನಾಂಕ:೧೪.೦೯.೨೦೧೫ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು - ೫೬೦ ೦೦೨ - ಅವರಿಗೆ ಕಳುಹಿಸಿಕೊಡಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ :
ಆಡಳಿತಾಧಿಕಾರಿಗಳು,
ಕನ್ನಡ ಪುಸ್ತಕ ಪ್ರಾಧಿಕಾರ,
ಕನ್ನಡ ಭವನ, ಜೆ.ಸಿ.ರಸ್ತೆ,
ಬೆಂಗಳೂರು-೫೬೦ ೦೦೨
ದೂ:೦೮೦-೨೨೪೮೪೫೧೬ / ೨೨೧೦೭೭೦೪ ಅನ್ನು ಸಂಪರ್ಕಿಸಬಹುದಾಗಿದೆ.

ಪ್ರಕಟಿತ ಪುಸ್ತಕಗಳು
ಚಿತ್ರಗಳು