ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವದಲ್ಲಿ ಕನ್ನಡ ಪುಸ್ತಕ ಮೇಳ-೨೦೧೫ ಮಳಿಗೆಗೆ ಅರ್ಜಿ ಆಹ್ವಾನ

ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವದಲ್ಲಿ ೨೦೧೫ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ: ೧೪.೧೦.೨೦೧೫ ರಿಂದ ೨೩.೧೦.೨೦೧೫ರವರೆಗೆ ಮೈಸೂರಿನಲ್ಲಿ ದಸರಾ ಕನ್ನಡ ಪುಸ್ತಕ ಮೇಳ-೨೦೧೫ನ್ನು ಏರ್ಪಡಿಸಲಾಗುವುದು.

ಈ ಪುಸ್ತಕ ಮೇಳದಲ್ಲಿ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.೧,೫೦೦-೦೦ಗಳ ಬಾಡಿಗೆ ಹಾಗೂ ರೂ.೧,೦೦೦-೦೦ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಪ್ರತ್ಯೇಕ - ಪ್ರತ್ಯೇಕವಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು - ಅವರ ಹೆಸರಿನಲ್ಲಿ ಸಲ್ಲಿಸುವುದು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಂದರೆ www.kannadapustakapradhikara.com ನಲ್ಲಿ ಅರ್ಜಿಯನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.

ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ದಿನಾಂಕ:೦೯.೧೦.೨೦೧೫ ರಂದು ಸಂಜೆ ೫.೩೦ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು - ಅವರ ಹೆಸರಿಗೆ ಸಲ್ಲಿಸಲು ಕೋರಿದೆ. ಆದ್ಯತೆಯ ಮೇರೆಗೆ ನಿರ್ಮಿಸಲಾಗುವ ೫೦ ಮಳಿಗೆಗಳನ್ನು ಹಂಚಿಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ :
ಆಡಳಿತಾಧಿಕಾರಿಗಳು,
ಕನ್ನಡ ಪುಸ್ತಕ ಪ್ರಾಧಿಕಾರ,
ಕನ್ನಡ ಭವನ, ಜೆ.ಸಿ.ರಸ್ತೆ,
ಬೆಂಗಳೂರು-೫೬೦ ೦೦೨
ದೂ:೦೮೦-೨೨೪೮೪೫೧೬ / ೨೨೧೦೭೭೦೪ ಅನ್ನು ಸಂಪರ್ಕಿಸಬಹುದಾಗಿದೆ.

ಪ್ರಕಟಿತ ಪುಸ್ತಕಗಳು
ಚಿತ್ರಗಳು