ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳ-೨೦೧೫ ಅರ್ಜಿ ನಮೂನೆ

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಒಟ್ಟು ಐದು ದಿನಗಳವರೆಗೆ ದಿನಾಂಕ:೨೪.೦೨.೨೦೧೬ರಿಂದ ೨೮.೦೨.೨೦೧೬ರವರೆಗೆ ’ರಿಯಾಯಿತಿಕನ್ನಡ ಪುಸ್ತಕ ಮಾರಾಟ ಮೇಳ-೨೦೧೫’ನ್ನು ಹಮ್ಮಿಕೊಳ್ಳಲಾಗಿದೆ.

ಈ ಪುಸ್ತಕ ಮೇಳದಲ್ಲಿ ಪ್ರಕಾಶನ ಸಂಸ್ಥೆಗಳು/ಪ್ರದರ್ಶಕರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.೧,೦೦೦-೦೦ಗಳ ಬಾಡಿಗೆ ಹಾಗೂ ರೂ.೧,೦೦೦-೦೦ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಪ್ರತ್ಯೇಕ - ಪ್ರತ್ಯೇಕವಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು -ಅವರ ಹೆಸರಿನಲ್ಲಿ ಸಲ್ಲಿಸುವುದು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಪ್ರದರ್ಶಕರು ನಿಗದಿತ ಅರ್ಜಿ ನಮೂನೆಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಂದರೆ wwww.kannadapustakapradhikara.comನಲ್ಲಿ ಅರ್ಜಿಯನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.

ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ದಿನಾಂಕ:೨೨.೦೨.೨೦೧೬ರಂದು ಸಂಜೆ ೫.೦೦ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು -ಅವರ ಹೆಸರಿಗೆ ಸಲ್ಲಿಸಲುಕೋರಿದೆ. ಆದ್ಯತೆಯ ಮೇರೆಗೆ ಮಳಿಗೆಗಳನ್ನು ಹಂಚಿಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ :
ಆಡಳಿತಾಧಿಕಾರಿಗಳು,
ಕನ್ನಡ ಪುಸ್ತಕ ಪ್ರಾಧಿಕಾರ,
ಕನ್ನಡ ಭವನ, ಜೆ.ಸಿ.ರಸ್ತೆ,
ಬೆಂಗಳೂರು-೫೬೦ ೦೦೨
ದೂ:೦೮೦-೨೨೪೮೪೫೧೬ / ೨೨೧೦೭೭೦೪ ಅನ್ನು ಸಂಪರ್ಕಿಸಬಹುದಾಗಿದೆ.

ಪ್ರಕಟಿತ ಪುಸ್ತಕಗಳು
ಚಿತ್ರಗಳು