೨೦೧೪ ಮತ್ತು ೨೦೧೫ನೇ ಸಾಲಿನ ಸಗಟು ಖರೀದಿ ಯೋಜನೆಯಡಿ ಖರೀದಿಸಲು ಅರ್ಜಿ ಆಹ್ವಾನ

ಕನ್ನಡ ಪುಸ್ತಕ ಪ್ರಾಧಿಕಾರವು ೨೦೧೪ ಮತ್ತು ೨೦೧೫ನೇ ಸಾಲಿನಲ್ಲಿ ಪ್ರಥಮಾವೃತ್ತಿಯಾಗಿ ಮುದ್ರಣಗೊಂಡ ಕನ್ನಡ ಪುಸ್ತಕಗಳನ್ನು ಪ್ರಾಧಿಕಾರದ ಸಗಟು ಖರೀದಿ ಯೋಜನೆಯಡಿ ಖರೀದಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ದಿನಾಂಕ:೨೮.೧೧.೨೦೧೬ ರಿಂದ ೨೪.೧೨.೨೦೧೬ರವರೆಗೆ ಪ್ರಾಧಿಕಾರದ ವೆಬ್‌ಸೈಟ್ http://kannadapustakapradhikara.com/ ಹಾಗೂ ಬೆಂಗಳೂರಿನಲ್ಲಿರುವ ಕನ್ನಡ ಪುಸ್ತಕ ಪ್ರಾಧಿಕಾರದ ಕಛೇರಿ ಮತ್ತು ಆಯಾ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಕಛೇರಿ ವೇಳೆಯಲ್ಲಿ ಉಚಿತವಾಗಿ, ಖುದ್ದಾಗಿ ಪಡೆದುಕೊಳ್ಳಬಹುದಾಗಿದೆ. ಎರಡು ಪುಸ್ತಕದ ಪ್ರತಿಯೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-೫೬೦ ೦೦೨ -ಅವರಿಗೆ ದಿನಾಂಕ:೨೪.೧೨.೨೦೧೬ ರಂದು ಸಂಜೆ ೫.೦೦ ಗಂಟೆಯೊಳಗೆ ಸಲ್ಲಿಸಲು ಕೋರಲಾಗಿದೆ.

ಪ್ರಕಟಿತ ಪುಸ್ತಕಗಳು
ಚಿತ್ರಗಳು