ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳ-೨೦೧೬ಕ್ಕೆ ಅರ್ಜಿ ಆಹ್ವಾನ ಕಡೆಯ ದಿನಾಂಕ: ೨೩.೧೨.೨೦೧೬

ಕನ್ನಡ ಪುಸ್ತಕ ಪ್ರಾಧಿಕಾರದಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಒಟ್ಟು ಐದು ದಿನಗಳವರೆಗೆ ದಿನಾಂಕ:೨೪.೧೨.೨೦೧೬ ರಿಂದ ೨೮.೧೨.೨೦೧೬ರವರೆಗೆ ’ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳ’ವನ್ನು ಹಮ್ಮಿಕೊಳ್ಳಲಾಗಿದೆ. ಈ ಪುಸ್ತಕ ಮೇಳದಲ್ಲಿ ಪ್ರಕಾಶನ ಸಂಸ್ಥೆಗಳು/ಪ್ರದರ್ಶಕರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.೧,೦೦೦-೦೦ಗಳ ಬಾಡಿಗೆ ಹಾಗೂ ರೂ.೧,೦೦೦-೦೦ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಪ್ರತ್ಯೇಕ - ಪ್ರತ್ಯೇಕವಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು - ಅವರ ಹೆಸರಿನಲ್ಲಿ ಸಲ್ಲಿಸುವುದು.


ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಪ್ರದರ್ಶಕರು ನಿಗದಿತ ಅರ್ಜಿ ನಮೂನೆಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಂದರೆ www.kannadapustakapradhikara.com ನಲ್ಲಿ ಅರ್ಜಿಯನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ದಿನಾಂಕ:೨೩.೧೨.೨೦೧೬ರಂದು ಸಂಜೆ ೪.೦೦ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು - ಇವರಿಗೆ ಸಲ್ಲಿಸಲು ಕೋರಿದೆ. ಆದ್ಯತೆಯ ಮೇರೆಗೆ ಮಳಿಗೆಗಳನ್ನು ಹಂಚಿಕೆ ಮಾಡಲಾಗುವುದು.

ಪ್ರಕಟಿತ ಪುಸ್ತಕಗಳು
ಚಿತ್ರಗಳು