ಸ್ವಾಗತ ನಿಮ್ಮ ಬುಟ್ಟಿ (0) | ಒಳಗೆ | ನೋಂದಾಯಿಸು
ಸುದ್ದಿ ಸಮಾಚಾರ:
ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ - ಹೆಚ್ಚಿನ ಮಾಹಿತಿಗೆ | ಪುಸ್ತಕಗಳನ್ನು ಕೊಂಡುಕೊಳ್ಳುವ ಬಗೆ - ಹೆಚ್ಚಿನ ಮಾಹಿತಿಗೆ |

ಡಾ. ಸುಧೀಂದ್ರ ಹಾಲ್ದೊಡ್ಡೇರಿ ನಿಧನಕ್ಕೆ ಡಾ.ಎಂ.ಎನ್.ನಂದೀಶ್ ಹಂಚೆ ಶೋಕ

ಪ್ರಕಟಿತ ವರ್ಷ : 02 Jul 2021 03:23 pm

ಕನ್ನಡದ ಖ್ಯಾತ ಬರಹಗಾರ, ಅಂಕಣಕಾರ, ವಿಜ್ಞಾನಿ ಡಾ.ಸುಧೀಂದ್ರ ಹಾಲ್ದೊಡ್ಡೇರಿ ನಿಧನಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಎಂ .ಎನ್. ನಂದೀಶ್ ಹಂಚೆ ಶೋಕ ವ್ಯಕ್ತಪಡಿಸಿದ್ದಾರೆ.

ಕನ್ನಡ ಪುಸ್ತಕ ಪ್ರಾಧಿಕಾರದ ಡಾ . ಅನುಪಮಾ ನಿರಂಜನ ವೈದ್ಯಕೀಯ ಮತ್ತು ವಿಜ್ಞಾನ ಸಾಹಿತ್ಯ ಪ್ರಶಸ್ತಿಯನ್ನ ಅವರಿಗೆ ಇಂದು ಘೋಷಣೆ ಮಾಡಲಾಗಿತ್ತು. ಪ್ರಶಸ್ತಿ ಘೋಷಿಸಿದ ದಿನವೇ ಅವರು ನಿಧನರಾದದ್ದು ತುಂಬಾ ದುರಾದೃಷ್ಟಕರ ಸಂಗತಿ ಎಂದಿರುವ ಅವರು ಕನ್ನಡ ವಿಜ್ಞಾನ ಸಾಹಿತ್ಯಕ್ಕೆ ಸುಧೀಂದ್ರ ಹಾಲ್ದೊಡ್ಡೇರಿ ಅವರ ಕೊಡುಗೆ ಅಪಾರ, ಅನೇಕ ಪತ್ರಿಕೆಗಳಲ್ಲಿ ಅಂಕಣಕಾರರಾಗಿ ಹೆಸರಾಗಿದ್ದರು.


ಕೇಂದ್ರ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ವಿಜ್ಞಾನಿಯಾಗಿ 22 ವರ್ಷ ಸೇವೆ ಸಲ್ಲಿಸಿದ್ದ ಅವರು ನಂತರ ಸ್ವಯಂನಿವೃತ್ತಿ ಪಡೆದು
ಬರೆಯುವ ಕಲೆ ರೂಢಿಸಿಕೊಂಡಿದ್ದರು. ಅವರ ನಿಧನದಿಂದ ಕನ್ನಡ ಅಕ್ಷರ ಲೋಕ ಒಬ್ಬ ಅತ್ಯುತ್ತಮ ಲೇಖಕರನ್ನು ಕಳೆದುಕೊಂಡಿದೆ.ಎಂದು ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

© 2021, ಕನ್ನಡ ಪುಸ್ತಕ ಪ್ರಾಧಿಕಾರ