ಸ್ವಾಗತ ನಿಮ್ಮ ಬುಟ್ಟಿ (0) | ಒಳಗೆ | ನೋಂದಾಯಿಸು
ಸುದ್ದಿ ಸಮಾಚಾರ:
ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ - ಹೆಚ್ಚಿನ ಮಾಹಿತಿಗೆ | ಪುಸ್ತಕಗಳನ್ನು ಕೊಂಡುಕೊಳ್ಳುವ ಬಗೆ - ಹೆಚ್ಚಿನ ಮಾಹಿತಿಗೆ |

ಸಂತಾಪ

ಪ್ರಕಟಿತ ವರ್ಷ : 27 Jul 2021 11:44 am

ಹಂಪಿ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ಏಚ್. ಜೆ. ಲಕ್ಕಪ್ಪಗೌಡ ಅವರ ನಿಧನಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಎನ್. ನಂದೀಶ್ ಹಂಚೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಲಕ್ಕಪ್ಪಗೌಡರ ಅಗಲುವಿಕೆ ದುರಾದೃಷ್ಟಕರ ಸಂಗತಿ ಎಂದಿರುವ ಅವರು ಲಕ್ಕಪ್ಪಗೌಡರು ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿ ಮಾಡಿದ ಕೆಲಸ ಅನುಕರಣೀಯ ಎಂದಿದ್ದಾರೆ.
ಜಾನಪದ ಅಕಾಡೆಮಿ ಅಧ್ಯಕ್ಷರಾಗಿ ಹಾಗೂ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ರಿಜಿಸ್ಟರ್ ಆಗಿ ಕಾರ್ಯನಿರ್ವಹಿಸಿದ್ದ ಲಕ್ಕಪ್ಪಗೌಡ ಅವರು ಅನೇಕ ಮೌಲಿಕ ಸಾಹಿತ್ಯ ಕೃತಿಗಳನ್ನು ಕನ್ನಡ ಪುಸ್ತಕಲೋಕಕ್ಕೆ ನೀಡಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಮತ್ತು ಜಾನಪದ ಕ್ಷೇತ್ರಕ್ಕೆ ಅವರ ಕೊಡುಗೆ ಅನನ್ಯವಾದದ್ದು.

ಅವರ ಅಗಲಿಕೆ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಬಹು ದೊಡ್ಡ ನಷ್ಟ ಎಂದು ಭಾವಿಸುತ್ತೇನೆ ಎಂದು ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

© 2021, ಕನ್ನಡ ಪುಸ್ತಕ ಪ್ರಾಧಿಕಾರ